ಮಂಡ್ಯ:  ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಹೌದು, ಮಂಡ್ಯದವರನ್ನು ನರಸತ್ತವರು, ಗಂಡಸರಾಗಿ, ಕೈಗೆ ಬಳೆ ತೊಟ್ಟುಕೊಳ್ಳಬೇಡಿ ಎಂದು ಜಿಲ್ಲೆಯ ರಾಜಕೀಯ ಮುಖಂಡರಿಗೂ ಶಿವರಾಮೇಗೌಡ ತಿವಿದಿದ್ದಾರೆ.

ಮಂಡ್ಯದ ನಾಗಮಂಗಲದಲ್ಲಿ ಮಾತನಾಡಿದ ಅವರು, ಡಾ.ಮಂಜುನಾಥ್ ಅಭ್ಯರ್ಥಿ ಮಾಡಲು ಯೋಗೇಶ್ವರ್ ಶ್ರಮವಹಿಸಿದರು. ಆದರೆ, ಚನ್ನಪಟ್ಟಣದಲ್ಲಿ ಯೋಗೇಶ್ವರ್‌ರನ್ನೇ ಬಲಿ ಪಡೆದಿದ್ದಾರೆ. ತಮ್ಮ ಕುಟುಂಬದವರನ್ನ ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರಬಲಿ ಪಡೆಯುತ್ತಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದರು.

ನಿಖಿಲ್ ಅಲ್ಲ ಕುಮಾರಸ್ವಾಮಿ ನಿಂತರೂ ಏನು ಮಾಡಲಾಗಲ್ಲ. ಯೋಗೇಶ್ವರ್ ಆಚೆ ಕಳುಹಿಸಲು ವಿಜಯೇಂದ್ರ, ಯಡಿಯೂರಪ್ಪ ಕಾರಣ. ಬಿಜೆಪಿ ಪಕ್ಷದ ಗುಂಪುಗಾರಿಕೆಯಿಂದ ಯೋಗೇಶ್ವರ್ ಆಚೆ ಹೋದರು. ಪಾಪ ಈಗ ನಿಖಿಲ್‌ನನ್ನ ಚುನಾವಣಾ ಆಹುತಿ ಮಾಡ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಡಾ. ಮಂಜುನಾಥ್ ಅಭ್ಯರ್ಥಿ ಮಾಡಲು ಯೋಗೇಶ್ವರ್ ಶ್ರಮವಹಿಸಿದ್ರು. ಆದರೆ ಚನ್ನಪಟ್ಟಣದಲ್ಲಿ ಯೋಗೇಶ್ವರ್‌ರನ್ನೇ ಬಲಿ ಪಡೆದಿದ್ದಾರೆ. ತಮ್ಮ ಕುಟುಂಬದವರನ್ನ ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರ ಬಲಿ ಪಡೆಯುತ್ತಾರೆ. ಚನ್ನಪಟ್ಟಣ ಜನ ದಡ್ಡರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ. ನಿಖಿಲ್ ಅಲ್ಲ ಕುಮಾರಸ್ವಾಮಿ ನಿಂತರೂ ಏನು ಮಾಡಲಾಗಲ್ಲ. ಯೋಗೇಶ್ವರ್ ಆಚೆ ಕಳುಹಿಸಲು ವಿಜಯೇಂದ್ರ, ಯಡಿಯೂರಪ್ಪ ಕಾರಣ. ಬಿಜೆಪಿ ಪಕ್ಷದ ಗುಂಪುಗಾರಿಕೆಯಿಂದ ಯೋಗೇಶ್ವರ್ ಆಚೆ ಹೋದರು. ಪಾಪ ಈಗ ನಿಖಿಲ್‌ನನ್ನ ಚುನಾವಣಾ ಆಹುತಿ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ 2 ಬಾರಿ ಲಾಟರಿಯಲ್ಲಿ ಸಿಎಂ ಆದವರು‌. ಕಳೆದ ಚುನಾವಣೆಯಲ್ಲಿ ಎಚ್‌ಡಿಕೆ‌ ಗಾಡಿ ನಿಂತು ಹೋಗಿತ್ತು. ಪಾಪ ಮುಳುಗುವ ಹಡಗು ಎಂದು ಮಂಡ್ಯ ಜನರ ಕೈ ಹಿಡಿದರು. ಉನ್ನತ ಹುದ್ದೆಯಲ್ಲಿದ್ದು ಕುಮಾರಸ್ವಾಮಿ ಏನು ಮಾಡ್ತಿದ್ದಾರೆ. ಮಂಡ್ಯದಲ್ಲಿ 4 ದಿನ ಬೆಂಗಳೂರಲ್ಲಿ 4 ದಿನ ಇರ್ತಾರೆ. ದೇಶ, ವಿದೇಶ ಸುತ್ತಿ ಬೃಹತ್ ಕೈಗಾರಿಕಾಗಳ ಸ್ಥಾಪನೆ ಮಾಡಬೇಕಿತ್ತು. ಆದರೆ ರಾಜ್ಯಕ್ಕೆ ಬಂದಾಗಲೆಲ್ಲಾ ಮುಡಾ ಕೇಸು, ಡಿಕೆಶಿ ಮುಖ ಕೆರೆಯುವ ಕೆಲಸ ಮಾಡ್ತಿದ್ದಾರೆ. ದೊಡ್ಡ ದೊಡ್ಡ ಕೈಗಾರಿಕಾ ತಂದು ಮಂಡ್ಯ ಜನರ ಋಣ ತೀರಿಸುವ ಕೆಲಸ ಕುಮಾರಸ್ವಾಮಿ ಮಾಡಬೇಕು ಎಂದು ಶಿವರಾಮೇಗೌಡ ಆಗ್ರಹಿಸಿದ್ದಾರೆ.

By Veeresh

Leave a Reply

Your email address will not be published. Required fields are marked *

Verified by MonsterInsights