ಬೆಂಗಳೂರು : ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.. ಬೆಂಗಳೂರಿನ ಮನೀಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ದೇವೇಗೌಡರಿಗೆ ಏನಾಗಿದೆ ಎನ್ನುವ ಬಗ್ಗೆ ಶೀಘ್ರದಲ್ಲಿಯೇ ಕುಟುಂಬ ಅಥವಾ ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಗಳಿವೆ.
ಇಳಿವಯಸ್ಸಿನಲ್ಲೂ ಹಾಸನ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದರು. ಟ್ರಕ್ ಗಣೇಶ ಮೆರವಣಿಗೆ ಮೇಲೆ ಹರಿದು ದುರಂತ ಸಂಭವಿಸಿದ ಬಳಿಕ ಸಂತ್ರಸ್ಥರ ಕುಟುಂಬ ವರ್ಗವನ್ನು ದೇವೇಗೌಡ ಭೇಟಿಯಾಗಿದ್ದರು. ಹೆಚ್‌ಡಿ ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಲೇ ಇದೆ. ಆದರೂ ಸಹ ದೊಡ್ಡಗೌಡರು ಸದ್ಯ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯಸಭೆ ಸದಸ್ಯರಾಗಿದ್ದಾರೆ.


