ಚನ್ನಪಟ್ಟಣ: ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಹೇಳಿದ್ದಾರೆ.ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಹೊಡಿಕೆ ಹೂಸಹಳ್ಳಿ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದ ವೇಳೆ ದೇವೇಗೌಡರು, ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ತಮಿಳುನಾಡು ನಮ್ಮ ದಾರಿಗೆ ಅಡ್ಡಿಪಡಿಸಿದೆ. ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿ, ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವು ಬಾರಿ ನನ್ನ ಮನವಿಯನ್ನು ಅವರು ಆಲಿಸಿದ್ದಾರೆ ಎಂದು ತಿಳಿಸಿದರು.
ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ; ಹೆಚ್. ಡಿ. ದೇವೇಗೌಡ
RELATED ARTICLES