ಆನೇಕಲ್: ಸಾಲಬಾಧೆ ತಾಳಲಾರದೇ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.
ಗಂಡ, ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅದೃಷ್ಟವಶಾತ್ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡ ಶಿವು (32), ಮಗಳು ಚಂದ್ರಕಲಾ (11) ಮಗ ಉದಯ್ ಸೂರ್ಯ (07) ಸಾವನ್ನಪ್ಪಿದ್ದಾರೆ.
ಗಂಡ ಹೆಂಡತಿ ಇಬ್ಬರೂ ಸಾಲದ ಬಾದೆಯಲ್ಲಿ ಇದ್ದು ಗಂಡನಿಗೆ ಕೆಲ ದಿನಗಳ ಹಿಂದೆ ಅಪಘಾತವಾಗಿತ್ತು. ಇದರಿಂದ ಎಲ್ಲರೂ ಸಹ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ ಆದರೆ ಮಂಜುಳಾ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ…


