Freedom TV
ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು

ಮೈಸೂರು: ನಗರದ ಯರಗನಹಳ್ಳಿಯಲ್ಲಿ ಮನೆಯೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು, ಮೇ 21ರ ರಾತ್ರಿ ಮಲಗಿದ್ದಲ್ಲೇ ನಿಗೂಢವಾಗಿ ಅಸುನೀಗಿರುವ ಘಟನೆ ನಡೆದಿದೆ.
ಪತಿ, ಪತ್ನಿ, ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಅಸುನೀಗಿದ್ದು, ಮೃತರನ್ನು ಕುಮಾರಸ್ವಾಮಿ (45), ಪತ್ನಿ ಮಂಜುಳ (39) ಮಕ್ಕಳಾದ ಅರ್ಚನಾ (19), ಸ್ವಾತಿ (17) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಇದು ಆತ್ಮಹತ್ಯೆಯೋ ಅಥವಾ ಬೇರೆ ಏನಾದರೂ ಕಾರಣದಿಂದ ಸಾವಿಗೀಡಾಗಿದ್ದಾರೋ ಎಂಬುದು ಪತ್ತೆಯಾಗಿಲ್ಲ. ಪ್ರಾಯಶಃ ಅನಿಲ ಸೋರಿಕೆಯೇ ಇವರ ಸಾವಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ.



