ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ನಲ್ಲಿ ಇಂದು ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ಉಣಿಸಿದ ಬಳಿಕ ಚೇತನ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕಿಸಲಾಗಿದೆ. ಚೇತನ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಮೃತಪಟ್ವವರೆಂದು ತಿಳಿದು ಬಂದಿದೆ. ಚೇತನ್ ಮೂಲತಃ ಹಾಸನ ಜಿಲ್ಲೆಯವರು. ಸಾಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಲಾಗಿದೆ. ಆದರೆ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.


