ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಈ ಮಹಿಳೆಯರು ಪಾಳುಬಿದ್ದ ಕಟ್ಟಡದ ಕೆಳಗೆ ವ್ಯಾಪಾರ ಮಾಡುತ್ತಿದ್ದರು. ಕಟ್ಟಡ ದಿಢೀರ್ ಕುಸಿದು ಬಿದ್ದಾಗ, ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.


