Wednesday, April 30, 2025
29.2 C
Bengaluru
LIVE
ಮನೆಸಿನಿಮಾದ್ವಾರಕೀಶ್‌ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ದ್ವಾರಕೀಶ್‌ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ದ್ವಾರಕೀಶ್ ನಿಧಾನ: ಕರ್ನಾಟಕದ ಕುಳ್ಳ, ನಟ, ನಿರ್ಮಾಪಕ ದ್ವಾರಕೀಶ್‌ ನಿಧನರಾಗಿದ್ದಾರೆ. ಕನ್ನಡ ಚಿತ್ರೋದ್ಯಮ ಕಂಡ ಹಿರಿ ತಲೆಯೊಂದು ಇದೀಗ ಕಣ್ಮರೆಯಾಗಿದೆ. 81ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಸ್ಯಾಂಡಲ್‌ವುಡ್‌ ಸೇರಿ ದಕ್ಷಿಣ ಭಾರತದ ದಿಗ್ಗಜ ನಟರು, ದ್ವಾರಕೀಶ್‌ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಅವರ ಜತೆಗಿನ ನಂಟು ಹೇಗಿತ್ತು ಎಂಬುದನ್ನು ನೆನಪು ಮಾಡಿಕೊಂಡಿದ್ದಾರೆ. ಇದೀಗ ಇದೇ ಹಿರಿಯ ನಟನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಮೋದಿ ಸಂತಾಪ

“ಚಿತ್ರೋದ್ಯಮಕ್ಕೆ ದ್ವಾರಕೀಶ್ ಅವರ ಕೊಡುಗೆ ಅಪಾರ. ದಶಕಗಳ ಕಾಲ ಮರೆಯಲಾಗದ ಸಿನಿಮಾಗಳನ್ನು ನೀಡಿ ಕೋಟ್ಯಂತರ ಚಿತ್ರಪ್ರೇಮಿಗಳನ್ನು ರಂಜಿಸಿದ್ದಾರೆ. ಯುವ ಪ್ರತಿಭೆಗಳಿಗೆ ಅವಕಾಶ ನೀಡಿ, ಕನ್ನಡ ಚಿತ್ರೋದ್ಯಮವನ್ನು ಕಟ್ಟಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲಬೇಕು. ಬಹುಮುಖಿ ಪಾತ್ರಗಳ ಮೂಲಕ ಎಲ್ಲರ ಮನಸ್ಸಿನಲ್ಲಿ ನೆಲೆನಿಂತಿದ್ದಾರೆ. ಅವರ ನಿಧನದ ಸುದ್ದಿ ನಿಜಕ್ಕೂ ನೋವುಂಟು ಮಾಡಿದೆ. ಅವರ ಅತ್ಯದ್ಭುತವಾದ ಸಿನಿಮಾ ಪಯಣ ಸ್ಮರಣೀಯ. ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪಗಳು. ಓಂ ಶಾಂತಿ” ಎಂದು ತಮ್ಮ X ವೇದಿಕೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments