ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಮಾಸಿಕ ಸಂಚಿತ ಗೌರವಧನದ ಅಧಾರದ ಮೇಲೆ ಕ್ಲರ್ಕ್ ಕಂ ಅಕೌಂಟೆಂಟ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಅಕೌಂಟೆಂಟ್ ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳ ನಿರ್ವಹಿಸುವಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ಹೊಂದಿದ್ದು, ಕನಿಷ್ಠ 03 ವರ್ಷಗಳ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವುಳ್ಳವರಾಗಿರಬೇಕು. 40 ವಯೋಮಾನ ಮೀರಿರಬಾರದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಪೂರ್ಣ ಹೆಸರು, ವಿಳಾಸ, ವಿದ್ಯಾರ್ಹತೆ, ಅನುಭವ ಪತ್ರ ಮತ್ತು ಇತರೆ ಮಾಹಿತಿಯೊಂದಿಗೆ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಬಾಲಕಾರ್ಮಿಕ ಯೋಜನಾ ಸಂಸ್ಥೆ, ಕೊಠಡಿ ಸಂಖ್ಯೆ: 03, ಕಾರ್ಮಿಕ ಇಲಾಖೆ, ಕಾರ್ಮಿಕ ಭವನ, ಬನ್ನೇರುಘಟ್ಟ ರಸ್ತೆ, ಬೆಂಗಳೂರು ಇಲ್ಲಿರುವ ರಾಜ್ಯ ಬಾಲಕಾರ್ಮಿಕ ಯೋಜನಾ ಸಂಘದ ಕಚೇರಿಗೆ 15 ದಿನಗಳ ಒಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8747845252 ಸಂಪರ್ಕಿಸಬಹುದು ಎಂದು ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com