ಸಿನಿಮಾಸುದ್ದಿ

ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ಮತ್ತೊಂದು ಚಿತ್ರಮಂದಿರ

ಕೆಲವು ದಿನಗಳ ಹಿಂದಷ್ಟೇ ಫಿಲ್ಮಿಬೀಟ್‌ನಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಚರ್ಚೆ ಮಾಡಲಾಗಿತ್ತು. ಕಳೆದ ಒಂದೂವರೆ ವರ್ಷದಿಂದ ಬೆರಳೆಣಿಕೆಯಷ್ಟು ಸಿನಿಮಾಗಳು ಗೆದ್ದಿದ್ದು ಬಿಟ್ಟರೆ, ಸೋತ ಸಿನಿಮಾಗಳ ಸಂಖ್ಯೆ ಬಹುದೊಡ್ಡದಿದೆ. ಸೂಪರ್‌ಸ್ಟಾರ್ ಸಿನಿಮಾಗಳು ಥಿಯೇಟರ್‌ ಕಡೆಗೆ ಮುಖವನ್ನೂ ಮಾಡುತ್ತಿಲ್ಲ. ಹೊಸ ಸಿನಿಮಾಗಳನ್ನು ನೋಡಲು ಪ್ರೇಕ್ಷಕರಿಗೆ ಮನಸ್ಸಿಲ್ಲ. ಈ ಪರಿಣಾಮ ಚಿತ್ರಮಂದಿರಗಳು ಒಂದೊಂದಾಗಿಯೇ ಮುಚ್ಚುತ್ತಿವೆ.

ಬೆಂಗಳೂರಿನಲ್ಲಿ ಈಗಾಗಲೇ ಸಾಕಷ್ಟು ಸಿನಿಮಾ ಮುಚ್ಚಿವೆ. ಆ ಜಾಗದಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್‌ಗಳು ತಲೆ ಎತ್ತಿ ನಿಂತಿವೆ. ಈ ಸಾಲಿಗೆ ಈಗ ಮತ್ತೊಂದು ಚಿತ್ರಮಂದಿರ ಸೇರಿಕೊಂಡಿದೆ. ಬೆಂಗಳೂರಿನ ಶ್ರೀಮಂತರ ಬಡಾವಣೆಗೆ ಸಮೀಪದಲ್ಲಿದ್ದ, ಸುಮಾರು 50 ವರ್ಷಗಳಿಂದ ಸಾಕಷ್ಟು ಸಿನಿಮಾಗಳನ್ನು ಪ್ರದರ್ಶನ ಮಾಡುತ್ತಾ ಬಂದಿದ್ದ ಚಿತ್ರಮಂದಿಗೆ ಈಗ ಸಂಪೂರ್ಣ ಸ್ಥಗಿತಗೊಂಡಿದೆ.

ಹೌದು, ಪ್ಯಾಲೇಜ್ ಗುಟ್ಟಹಳ್ಳಿಯಲ್ಲಿದ್ದ ಫೇಮಸ್ ಸಿಂಗಲ್ ಸ್ಕ್ರೀನ್ ‘ಕಾವೇರಿ’ ಸಂಪೂರ್ಣವಾಗಿ ತನ್ನ ಪ್ರದರ್ಶನವನ್ನು ನಿಲ್ಲಿಸಿದೆ. ಇಲ್ಲಿ ಕನ್ನಡವೂ ಸೇರಿದಂತೆ ಹಿಂದಿ ಹಾಗೂ ಪರಭಾಷೆಯ ಸಿನಿಮಾಗಳು ಪ್ರದರ್ಶನ ಕಾಣುತ್ತಿದ್ದವು. ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಕನ್ನಡದ ದಿಗ್ಗಜರ ಸಿನಿಮಾಗಳು ಇದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು.

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

 

 

Comments (0)

Your email address will not be published. Required fields are marked *

Back to top button