ಸುದ್ದಿ

ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ‘ಚಿನ್ನ’ ವಶ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಸಿಂಗಾಪುರದಿಂದ ಬಂದ ಇಂಡಿಗೋ 6E1006 ವಿಮಾನದಲ್ಲಿ ಆಗಮಿಸಿದು ಪ್ಯಾಕ್ಸ್ ನಲ್ಲಿ ಸುಮಾರು 55 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದ್ದು ಅದನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂಬ ಮಾಹಿತಿ ಬಂದಿದೆ.

ಸುಮಾರು 799 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಒಳ ಉಡುಪುಗಳಲ್ಲಿ ಇಟ್ಟುಕೊಂಡು ಮರೆಮಾಚಲಾಗಿದು  ಬೆಂಗಳೂರಿಗೆ ಬಂದಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ಒಳ ಉಡುಪು ಹಾಗೂ ಪ್ಯಾಕ್ಸ್ ಅನ್ನು  ವಶಕ್ಕೆ ಪಡೆದುಕೊಂದು  ಹೆಚ್ಚಿನ ತನಿಖೆ ನಡೆಸುತ್ತಿರುವ ಕಸ್ಟಮ್ಸ್ ಅಧಿಕಾರಿಗಳು .
ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

 

 

Comments (0)

Your email address will not be published. Required fields are marked *

Back to top button