ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಬೆನ್ನಲೇ ಡಿಕೆ ಶಿವಕುಮಾರ್ ಫೋಟೋವೊಂದು ಹರಿಬಿಡಲಾಗಿದೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದ್ದು. ಇದರ ಮೇರೆಗೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.
ಫೇಸ್ಟುಕ್, ಯೂಟ್ಯೂಬ್, ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ.
ಈ ದೂರಿನ ಮೇರೆಗೆ ಬೆಂಗಳೂರಿನ ಹೈಗೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ FIR ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.