Tuesday, June 24, 2025
27.5 C
Bengaluru
Google search engine
LIVE
ಮನೆಸುದ್ದಿ3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾಯುಕ್ತ ಬಲೆಗೆ

3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ದೊಡ್ಡಬಳ್ಳಾಪುರದ ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. 3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ರೆಂಡ್ ಆ್ಯಂಡ್ ಆಗಿ ಹಿಡಿದಿದ್ದಾರೆ.

ನರಸಿಂಹಮೂರ್ತಿ ಎಂಬ ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ಪಿಡಿಒನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕು ಪಂಚಾಯತಿ ಆವರಣದಲ್ಲಿ ಅಧಿಕಾರಿಯನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ಪಿಡಿಒರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com
Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments