ಕೋಲಾರ :ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ ಕಾಣಿಸಿಕೊಂಡ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಶಾಸಕಿ ರೂಪಕಲಾ ಕೋಲಾರ ಜಿಲ್ಲೆಯಾದ್ಯಂತ ಅಭ್ಯರ್ಥಿಗಳು ಪ್ರಚಾರ ಮಾಡುತ್ತಿದ್ದರೂ, ಎಲ್ಲೂ ಕಾಣಿಸಿಕೊಳ್ಳದ ಕೆ.ಎಚ್.ಮುನಿಯಪ್ಪ ಮತ್ತು ಶಾಸಕಿ ರೂಪಕಲಾ ಇಂದು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪ್ರತ್ಯಕ್ಷವಾಗಿದ್ದರೆ.
ನಾಮಪತ್ರ ಸಲ್ಲಿಸಿದ ಬಳಿಕ ಡಿಸಿ ಕಚೇರಿ ಬಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ ಕೆ.ಹೆಚ್ ಮುನಿಯಪ್ಪ ಸೇರಿದಂತೆ ಕಾಂಗ್ರೆಸ್ ನಾಯಕರು ಬಂದಿರುವುದು ಶುಭ ಸಂದೇಶವಾಗಿದೆ ಕ್ಷೇತ್ರದಲ್ಲಿ ಯಾವುದೇ ಅಡೆತಡೆ ಇಲ್ಲದೆ ಚುನಾವಣೆ ಎದುರಿಸುತ್ತೇವೆ ಕೋಲಾರ ಕ್ಷೇತ್ರದಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ
ನಾಳೆಯಿಂದ ಪಂಚಾಯಿತಿ ಮಟ್ಟದಲ್ಲಿ ಪ್ರಚಾರ ಮಾಡುತ್ತೇವೆ ಏ.6 ರಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕ್ಷೇತ್ರಕ್ಕೆ ಬರ್ತಾರೆ ಜೆಡಿಎಸ್ ಬಿಜೆಪಿ ಒಂದಾದರೂ ನಮಗೆ ಏನೂ ಸಮಸ್ಯೆಯಾಗುವುದಿಲ್ಲ ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಅವರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ ಎಂದು ಕೆ.ವಿ ಗೌತಮ್ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡು ಬಂದಿದ್ದರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್ ಹೇಳಿದೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ ಎಂದು ಕೋಲಾರದಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ