ಬೆಂಗಳೂರು: ಸಂತ್ರಸ್ತೆ ಮಹಿಳೆಯೊಬ್ಬರನ್ನು ಅಪಹರಿಸಿದಂತ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಶಕ್ಕೆ ಪಡೆದಿದ್ದರು. ಈಗ ಅವರನ್ನು 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಜೈಲುಪಾಲಾಗಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದಂತ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ತಮ್ಮ ವಶಕ್ಕೂ ಪಡೆದಿದ್ದರು. ಮೇ.8ರವಗೆ ಎಸ್ಐಟಿ ವಶಕ್ಕೆ ಕೋರ್ಟ್ ನೀಡಿತ್ತು.
ಇಂದು ಹೆಚ್.ಡಿ ರೇವಣ್ಣ ಅವರ ಎಸ್ಐಟಿ ವಶದ ಕಾಲಾವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಾಧೀಶರು. ಅವರ ಜಾಮೀನು ಅರ್ಜಿಯನ್ನು ನಾಳೆಗೆ ಮುಂದೂಡಿ, 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಜೈಲುಪಾಲು ಆದಂತೆ ಆಗಿದೆ. ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡೋ ಸಾಧ್ಯತೆ ಇದೆ.