ಬೆಂಗಳೂರು: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಚುನಾವಣೆ ಪ್ರಚಾರದ ಅನುಭವಗಳನ್ನು ಫೆಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ .
ಕಳೆದೊಂದು ತಿಂಗಳ ಅವಧಿ ಜೀವನದಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವ ವಿಶಿಷ್ಟ ಅನುಭವಗಳನ್ನು ನೀಡಿದೆ. ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತುಂಬೆಲ್ಲ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದೇನೆ. ಹೋದ ಕಡೆಯೆಲ್ಲ ಜನರು ನನ್ನನ್ನು ತಮ್ಮ ಕುಟುಂಬ ಸದಸ್ಯೆಯಂತೆ ಕಂಡಿದ್ದಾರೆ, ಪ್ರೀತಿ ತೋರಿದ್ದಾರೆ, ವಿಶ್ವಾಸ ತುಂಬಿದ್ದಾರೆ. ನಿಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು, ಮುಂದಿನ ದಿನಗಳಲ್ಲಿ ನಿಮ್ಮ ಸೇವೆಯ ಮೂಲಕ ಆ ಋಣ ತೀರಿಸುವ ಪ್ರಯತ್ನ ಮಾಡುತ್ತೇನೆ.
ನನ್ನ ಈ ಪಯಣದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಂದ ದೊರೆತ ಬೆಂಬಲಕ್ಕೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಕಡಿಮೆಯೆ. ತಾವೇ ಅಭ್ಯರ್ಥಿ ಎನ್ನುವಂತೆ ಹಗಲು ರಾತ್ರಿ ನಿಸ್ವಾರ್ಥದಿಂದ ಪ್ರಚಾರ ನಡೆಸಿದ, ಮತ ಯಾಚಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು.
ಬದಲಾವಣೆಯ ನನ್ನ ಪ್ರಯತ್ನಕ್ಕೆ ಜೊತೆನಿಂತು ಬೆಂಬಲಿಸಿದ ಪ್ರತಿಯೊಬ್ಬರಿಗೂ ನಾನು ಋಣಿ. ಸಂಸದೆಯಾಗಿ ನಿಮ್ಮ ಸೇವೆ ಮಾಡುವ ಭಾಗ್ಯ ನನ್ನದಾಗಲಿ ಎಂದು ಆಶಿಸುತ್ತೇನೆ.
ಮತದಾನ ಮಾಡಿದ ಪ್ರತಿಯೊಬ್ಬರಿಗೂ ನನ್ನ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸೌಮ್ಯರೆಡ್ಡಿ ಧನ್ಯವಾದಗಳನ್ನು ತಿಳಿಸಿದ್ದಾರೆ.