Wednesday, December 10, 2025
19.7 C
Bengaluru
Google search engine
LIVE
ಮನೆಆರೋಗ್ಯಹಾಸ್ಟೆಲ್ ಊಟ ಸೇವಿಸಿ 24 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್ ಊಟ ಸೇವಿಸಿ 24 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ಹಾಸ್ಟೆಲ್ ಆಹಾರ ಸೇವಿಸಿ ವಸತಿ ನಿಲಯದ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

ಸಿಂಧನೂರಿನ ಅಂಬೇಡ್ಕರ್ ವಸತಿ ನಿಲಯದಲ್ಲಿ ನಿನ್ನೆ ಮಧ್ಯಾಹ್ನದ ಊಟ ಸೇವಿಸಿದ ಬಳಿಕ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ಎರಡು ಗಂಟೆ ವಿದ್ಯಾರ್ಥಿನಿಯರು ನರಳಾಡಿದ್ದಾರೆ.

ಅಸ್ವಸ್ಥ ವಿದ್ಯಾರ್ಥಿನಿಯರನ್ನು ತಡರಾತ್ರಿಯೇ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ತಾಲೂಕು ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರು ಇಲ್ಲದ ಕಾರಣ ಅಸ್ವಸ್ಥ ವಿದ್ಯಾರ್ಥಿನಿಯರು ಪರದಾಟ ಅನುಭವಿಸಬೇಕಾಯಿತು. ಬಳಿಕ ಟಿಎಚ್‌ಓಗೆ ಕರೆ ಮಾಡಿ ಹಾಸ್ಟೆಲ್ ಸಿಬ್ಬಂದಿ ಮಾಹಿತಿ ತಿಳಿಸಿದ್ದರು.

ಎರಡು ಗಂಟೆ ತಡವಾಗಿ ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ್ ಪೊತೆದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments