Freedom TV
ಜೈಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ವಶಕ್ಕೆ.

ಬೆಂಗಳೂರು: ನಿನ್ನೆ ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನ ಅನ್ಯಕೋಮಿನ ಕೆಲ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದವರ ಮೇಲೆ ಹಲ್ಲೆ ಮಾಡಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಮೀರ್ ಮತ್ತು ಫರ್ಮಾನ್ ಹಾಗೂ ಇಬ್ಬರು ಅಪ್ರಾಪ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತರು ನೀಡಿದ ದೂರಿನ ಮೇರೆಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎನ್ನಲಾಗಿದೆ.
ಘಟನೆ ಸಂಬಂಧ ಬಿಜೆಪಿ ಮುಖಂಡರು ವಿದ್ಯಾರಣ್ಯಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್ಗೆ ದೂರು ನೀಡಿದ್ದು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.




