ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಎನ್.ಅರ್ಜುನ್ ದೇವ್ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಹಿರಿಯ ಪತ್ರಕರ್ತರುಗಳಾದ ಕೆ.ಎಸ್.ಶೇಷಚಂದ್ರಿಕಾ, ಡಾ.ಈಶ್ವರ ದೈತೋಟ, ಎಸ್.ಆರ್.ಆರಾಧ್ಯ, ಬೋಪಯ್ಯ ಚಾವಂಡ, ನಾಗರಾಜ್ ಮೂರ್ತಿ, ಸೋಮಶೇಖರ ಗಾಂಧಿ ಮಾತನಾಡಿದರು.
ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು.
ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ, ಎರಡು ಅವಧಿಗೆ ಅಧ್ಯಕ್ಷರಾಗಿ ಸಲ್ಲಿಸಿದ್ದ ಸೇವೆಯನ್ನು ಸಭೆಯಲ್ಲಿ ಸ್ಮರಿಸಲಾಯಿತು.