Thursday, November 20, 2025
21.7 C
Bengaluru
Google search engine
LIVE
ಮನೆಸಿನಿಮಾಕಲ್ಕಿ ಸಿನಿಮಾ ರಿಲೀಸ್ ಡೇಟ್ ಕೊನೆಗೂ ರಿವಿಲ್

ಕಲ್ಕಿ ಸಿನಿಮಾ ರಿಲೀಸ್ ಡೇಟ್ ಕೊನೆಗೂ ರಿವಿಲ್

ಬೆಂಗಳೂರು: ಅಂತೂ ಇಂತೂ ಪ್ರಭಾಸ್ ಫ್ಯಾನ್ಸ್ ಗೆ ಕಲ್ಕಿ ಟೀಮ್ ಇಂದ ಗುಡ್ ನ್ಯೂಸ್ ಸಿಕ್ಕಿದೆ .ಕಲ್ಕಿ ಮೂವಿ ರಿಲೀಸ್ ದಿನಾಂಕವನ್ನು ಕೊನೆಗೂ ಸಿನೆಮಾ ತಂಡದಿಂದ ಅನೌನ್ಸ್ ಆಗಿದೆ…

‌ನಾಗ್‌ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾ, ಈಗಾಗಲೇ ಬಹುತೇಕ ಶೂಟಿಂಗ್‌ ಮುಗಿಸಿಕೊಂಡಿದೆ. ಹೀಗಿರುವಾಗಲೇ ಇದೇ ಸಿನಿಮಾದಿಂದ ಬ್ರೇಕಿಂಗ್‌ ಸುದ್ದಿಯೊಂದು ಹೊರಬಿದ್ದಿದೆ. ಈ ವರೆಗೂ ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎದುರಾಗುತ್ತಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಇದೇ ಜೂನ್‌ 27ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ.

ನಾಗ ಅಶ್ವಿನ್‌ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸೈನ್ಸ್‌ ಫಿಕ್ಷನ್‌ ಕಲ್ಕಿ ಚಿತ್ರ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ..

ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾದಲ್ಲಿ ಬಹುತಾರಾಗಣವೇ ಹೈಲೈಟ್.‌ ಪ್ರಭಾಸ್‌ ನಾಯಕನಾಗಿ ನಟಿಸುತ್ತಿದ್ದರೆ, ದೀಪಿಕಾ ಪಡುಕೋಣೆ, ಅಮಿತಾಬ್‌ ಬಚ್ಚನ್‌, ಕಮಲ್‌ ಹಾಸನ್‌, ಸೇರಿ ಘಟಾನುಘಟಿಗಳೇ ನಟಿಸುತ್ತಿದ್ದಾರೆ. ವೈಜಯಂತಿ ಮೂವೀಸ್‌ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. ಪುರಾಣ ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ ಇದಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments