ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ವಿಮಾನ ನಿಲ್ದಾಣದಲ್ಲಿ ಬಿಜೆಪಿ ಪದಾಧಿಕಾರಿಗಳು ಹೂ ಗುಚ್ಛ ನೀಡಿ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಿದರು. ಶ್ರೀ ರಾಮುಲು ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾದ ನಂತರ ಲಿಂಗಾಯತ ಮುಖಂಡರ ಸಭೆ ಬಳ್ಳಾರಿ ಜಿಲ್ಲಾ ವೀರಶೈವ ವಿದ್ಯಾವರ್ಧಕ ಸಂಘದ ಸಭೆಯಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದರು.