ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಸುಪ್ರಿಯಾ ಶ್ರೀನಾತೆ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸ್ತ್ರೀ ವಿರೋಧಿ ಮನಸ್ಥಿತಿಯನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್ ಅವರು ತಿಳಿಸಿದರು.

“ಜಿ.ಎಂ. ರಿಜಾಯ್ಸ್” ನ ಬಿಜೆಪಿ ಲೋಕಸಭಾ ಚುನಾವಣಾ 2024ರ ಇಂದು ಅವರು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಶಾಮನೂರು ಶಿವಶಂಕರಪ್ಪ ಅವರು ‘ಮಹಿಳೆಯರು ಮನೆಯಲ್ಲಿರಲು ಮಾತ್ರ ಲಾಯಕ್ಕು’ ಎಂಬ ರೀತಿಯಲ್ಲಿ ಮಾತನಾಡಿದ್ದಾರೆ. ಇದು ಅತ್ಯಂತ ವಿಷಾದನೀಯ ಎಂದು ತಿಳಿಸಿದರು.

ಶಾಮನೂರು ಅವರ ಪಕ್ಷದ ಅಧ್ಯಕ್ಷೆ ಸ್ವತಃ ಒಬ್ಬ ಮಹಿಳೆ. ಹಿಂದೆ ಅವರ ಪಕ್ಷದ ಮಹಿಳೆ ಈ ರಾಷ್ಟ್ರದ ಪ್ರಧಾನಿ ಆಗಿದ್ದರು. ಈಗ ಆ ಪಕ್ಷದಲ್ಲಿ ಪ್ರಿಯಾಂಕ ವಾಧ್ರಾ ಮತ್ತು ಸೋನಿಯಾ ಗಾಂಧಿಯವರು ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದರು. ಹೀಗಿರುವಾಗ ಮತ್ತೊಂದು ಪಕ್ಷದ ಅಭ್ಯರ್ಥಿ ಬಗ್ಗೆ ಅಗೌರವದ ಮಾತನಾಡುವುದು ಖಂಡನೀಯ ಎಂದು ಹೇಳಿದರು.

ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಸ್ತ್ರೀಯರನ್ನು ಪ್ರತ್ಯೇಕವಾಗಿ ಗುರುತು ಮಾಡಿಕೊಂಡು ಆರ್ಥಿಕ- ಸಾಮಾಜಿಕವಾಗಿ ಸಶಕ್ತ ಮಾಡಲು ಅನೇಕ ಯೋಜನೆಗಳನ್ನು ಕಳೆದ 10 ವರ್ಷಗಳಲ್ಲಿ ಜಾರಿಗೊಳಿಸಿದ್ದಾರೆ. ಹೆಣ್ಣುಮಕ್ಕಳಿಗೆ ಅನುಕೂಲವಾಗಲೆಂದು ಮೋದಿಜೀ ಅವರು ಜನ್ ಧನ್, ಸ್ವಚ್ಛ ಭಾರತ್ ಮತ್ತಿತರ ನೂರಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಪರಿಶ್ರಮ ಪಡುತ್ತಿದ್ದಾರೆ ಎಂದು ವಿವರಿಸಿದರು.

 

By admin

Leave a Reply

Your email address will not be published. Required fields are marked *

Verified by MonsterInsights