ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಬಿಲ್ಡರ್ಗಳಿಗೆ ಐಟಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಹಲವು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 20ಕ್ಕೂ ಹೆಚ್ಚು ಕಡೆ ದಾಳಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಂಗಳೂರಿನ ಕೆ.ಆರ್ .ಪುರಂ, ಕೊಡಿಗೇಹಳ್ಳಿ ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಸದ್ಯ ಕಡತಗಳ ಪರಿಶೀಲನೆಯಲ್ಲಿ ಐಟಿ ಅಧಿಕಾರಿಗಳು ತೊಡಗಿದ್ದಾರೆ. ಬಿಲ್ಡರ್ಗಳು ತೆರಿಗೆ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.