Freedom TV

ಕೆಪಿಎಸ್​ಸಿ ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ!

ಬೆಂಗಳೂರು : ಕೆಪಿಎಸ್​ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ಆಯ್ಕೆ ಪಟ್ಟಿ ನಾಪತ್ತೆ ಬಗ್ಗೆ ಕೆಪಿಎಸ್ ಸಿ ಸಹಾಯಕ ಕಾರ್ಯದರ್ಶಿಯಿಂದ  ವಿಧಾನ ಸೌಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

2016 ರಲ್ಲಿ ನಡೆದ ಕೊಳಗೇರಿ‌ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿ ಮಾಡಲಾಗಿತ್ತು. 2018 ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿಯೂ ಸಹ ಪ್ರಕಟವಾಗಿತ್ತು. ಇದನ್ನ ಪ್ರಶ್ನಿಸಿ ಒಬ್ಬ ವ್ಯಕ್ತಿ ಹೈಕೋರ್ಟ್​ ಮೊರೆ ಹೋಗಿದ್ದ. ಬಳಿಕ ಹೈಕೋರ್ಟ್ ಆದೇಶದಂತೆ ಕೆಪಿಎಸ್​ಸಿ ಗೌಪ್ಯ ಶಾಖೆ-3 ರಲ್ಲಿ ಆಯ್ಕೆ ಪಟ್ಟಿ ತಯಾರಿ ಮಾಡಿತ್ತು.

ಜನವರಿ 22 ರಂದು ಕಾರ್ಯದರ್ಶಿಯವರ ಆಪ್ತ ಶಾಖೆಯಲ್ಲಿ ಕಡತ ಸ್ವೀಕಾರವಾಗಿತ್ತು. ಆ ಬಳಿಕ ಕಡತ ನಾಪತ್ತೆ ಎಂದು ದೂರು ದಾಖಲಾಗಿದೆ. ಬಳಿಕ ಕೆಪಿಎಸ್​ಸಿ ಯ‌ ಎಲ್ಲಾ ಶಾಖೆಗಳಲ್ಲೂ ಕಡತಕ್ಕಾಗಿ ಶೋಧ ನಡೆಸಲಾಗುತ್ತಿದೆ. ಕಡತ ಪತ್ತೆಯಾದಲ್ಲಿ ಕೂಡಲೇ ಶಾಖೆ-2 ಕ್ಕೆ‌ ಹಿಂದಿರುಗಿಸುವಂತೆ ಕೆಪಿಎಸ್​ಸಿ ಜ್ಞಾಪನ ಹೊರಡಿಸಿತ್ತು.

ಬಳಿಕ‌ ಕೆಪಿಎಸ್​ಸಿ ಸಿಬ್ಬಂದಿಯಿಂದ ಕಡತಕ್ಕಾಗಿ ಎಲ್ಲೆಡೆ ಶೋಧ ನಡೆಯುತ್ತಿದೆ. ಅಧಿಕಾರಿ, ಸಿಬ್ಬಂದಿಗಳು ಸುಮಾರು ಒಂದು ತಿಂಗಳು ಶೋಧ ನಡೆಸಿದ್ದಾರೆ ನಂತರ ಕಡತ ನಾಪತ್ತೆ ಬಗ್ಗೆ ದೂರು ದಾಖಲಿಸಲು ಆಯೋಗದ ಸಭೆ ನಿರ್ಧಾರ ತೆಗೆದುಕೊಂಡಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button