Freedom TV

ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ

ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೆಡೆದಿದೆ.

ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಯುವಕ ಕೆಳಗೆ ಜಿಗಿದಿದ್ದಾನೆ. ಕೂಡಲೇ ತೀವ್ರ ರಕ್ತಸ್ರಾವವಾಗಿ ಯುವಕ ಸಾವನ್ನಪ್ಪಿದ್ದಾನೆ. ಇನ್ನೂ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ. ಮೃತ ಯುವಕನ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.

 

Comments (0)

Your email address will not be published. Required fields are marked *

Back to top button