ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಭರ್ಜರಿ ಹಣ ವಶಕ್ಕೆ ಪಡೆದಿದ್ದಾರೆ.ಜಯನಗರದ ನಾಲ್ಕನೇ ಬಡಾವಣೆಯಲ್ಲಿ ಕಾಂಗ್ರೆಸ್ರವರು ಚುನಾವಣೆಗೆಂದು ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ಎರಡು ವಾಹನದಲ್ಲಿ ಸಿಕ್ಕಿಬಿದ್ದಿದ್ದಾರೆ.
ವಿಚಾರಿಸಲು ಯತ್ನಿಸಿದಾಗ ವಾಹನ ಮಾಲೀಕರು ಬೇರೆ Fortuner (ಫಾರ್ಚೂನರ್) ಕಾರಿನಲ್ಲಿ ತಪ್ಪಿಸಿಕೊಂಡಿದ್ದಾರೆ ಚುನಾವಣೆ ಸಂದರ್ಭದಲ್ಲಿ ಹತಾಶ ಕಾಂಗ್ರೆಸ್ ಮತ್ತು ಡಿಕೆ ಶಿವಕುಮಾರ್ ಬೆಂಬಲಿಗರಿಗೆ ಸೇರಿದ ವಾಹನಗಳು ಎನ್ನಲಾಗುತ್ತಿದೆ. ವಾಹನದಲ್ಲಿ ಲಕ್ಷಾಂತರ ರೂಪಾಯಿ ಹಣ ಇರುವುದು ಪತ್ತೆಯಾಗಿದೆ ವಾಹನ ಮಾಲೀಕರು ಸ್ಥಳದಿಂದ ಪರಾರಿಯಾಗಿದ್ದಾರೆ.