ಗದಗ : ಹಾವೇರಿ – ಗದಗ ಲೋಕಸಭಾ ಚುನಾವಣೆಯ ಅಂಗವಾಗಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ ವ್ಯಾಪ್ತಿಯ ಬಾಗೇವಾಡಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶಾಸಕರಾದ ಡಾ. ಚಂದ್ರು ಕೆ.ಲಮಾಣಿ ರವರು ಚಕ್ಕಡಿ ಏರಿ ರೋಡ್ ಶೋ ಮೂಲಕ ಮತಬೇಟೆ ನಡೆಸಿದರು.

ನಂತರ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಬೆಂಬಲಿಸಿ ಮತ ನೀಡುವಂತೆ ಕೇಳಿಕೊಂಡರು. ಇತ್ತ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಸಿ.ಸಿ ಪಾಟೀಲರು ತೇರೆದ ವಾಹನದಲ್ಲಿ ಮತಯಾಚನೆ ಮಾಡಿದರು. ರೋಡ್ ಶೋ ನಲ್ಲಿ ಸಾವಿರಾರು ಯುವಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಭಾಗವಹಿಸಿ, ಬಿಜೆಪಿ ಬೆಂಬಲಿಸಿ, ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ ಮತ್ತು ಹಿಂದಿನ ಬಿಜೆಪಿ ಸರಕಾರದ ಸಾಧನೆಗಳು ಹಾಗೂ ಜನಪರ ಯೋಜನೆಗಳ ಕುರಿತು ಮಾತನಾಡಿ, ಕರ್ನಾಟಕ ರಾಜ್ಯಕ್ಕೆ ಸಮಗ್ರ ಅಭಿವೃದ್ಧಿಗೆ ಕಾರಣೀಕರ್ತರಾದ ಬಸವರಾಜ ಬೊಮ್ಮಾಯಿಯವರಿಗೆ ಅತಿ ಹೆಚ್ಚು ಮತಗಳನ್ನು ನೀಡುವಂತೆ ಮಾಜಿ ಸಚಿವ ಸಿ. ಸಿ ಪಾಟೀಲ ಮನವಿ ಮಾಡಿದರು.

ರೋಡ್ ಶೋ ಪ್ರಚಾರದಲ್ಲಿ ಮುಂಡರಗಿ ಮಂಡಲದ ಅಧ್ಯಕ್ಷರು, ಗ್ರಾಮದ ಗುರು ಹಿರಿಯರು ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪ್ರಮುಖರ, ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು, ತಾಯಿಂದಿರು, ಯುವಕ ಮಿತ್ರರು, ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.

By admin

Leave a Reply

Your email address will not be published. Required fields are marked *

Verified by MonsterInsights