ಗದಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್​ ಮತ್ತು ಕಾಂಗ್ರೆಸ್ ಅತಿ ಹೆಚ್ಚು ಸೀಟು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಹೀಗಾಗಿ ವಿರೋಧ ಪಕ್ಷಗಳ ಪ್ರಮುಖ ಮುಖಂಡರನ್ನು ಪಕ್ಷಕ್ಕೆ ಸೆಳೆಯುವ ಕೆಲಸ ಕ್ಷೇತ್ರಗಳಲ್ಲಿ ಜೋರಾಗಿದೆ. ಅದರಂತೆ ಗದಗನಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ, ಆರ್​ಆರ್​ಎಸ್ ಸ್ವಯಂ ಸೇವಕರೊಬ್ಬರು ಗಣವೇಷದಲ್ಲೇ ಕಾಂಗ್ರೆಸ್​​ ಸೇರ್ಪಡೆಯಾಗಿ ಗಮನಸೆಳೆದಿದ್ದಾರೆ.

ಬಿಜೆಪಿ  ಹಿರಿಯ ಕಾರ್ಯಕರ್ತ ಒಬ್ಬ ಆರ್​​ಎಸ್​ಎಸ್  ಗಣ ವೇಷದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಿ ಎಲ್ಲರ ಗಮನಸೆಳೆದಿದ್ದಾರೆ. ಇಂದು ಗದಗ ಜಿಲ್ಲೆಯ ನರಗುಂದದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರೋಣ ತಾಲೂಕಿನ ಮೆಣಸಗಿ ಗ್ರಾಮದ ನಿಂಗಬಸಪ್ಪ ಬಾಣದ್ ಎನ್ನುವ ಆರ್​ಎಸ್​ಎಸ್​ ಸ್ವಯಂ ಸೇವಕ ಕಾಂಗ್ರೆಸ್​ಗೆ​ ಸೇರ್ಪಡೆಯಾದರು. ಮೂವತ್ತು ವರ್ಷದಿಂದ ಆರ್​ಎಸ್​ಎಸ್ ಸಕ್ರೀಯ ಕಾರ್ಯಕರ್ತರಾಗಿರುವ ಬಾಣದ್ ಅವರು ಗಣವೇಷದಲ್ಲೇ ಕಾಂಗ್ರೆಸ್​​ ಶಾಲು ಹಾಕಿಸಿಕೊಂಡಿರುವುದು ವಿಶೇಷ.

ಮಾಜಿ ಶಾಸಕ ಎಸ್​.ಜಿ ನಂಜಯ್ಯನ ಮಠ ಸಮ್ಮುಖದದಲ್ಲಿ ನಿಂಗಬಸಪ್ಪ ಬಾಣದ್ ಅವರು ಬಿಜೆಪಿ ತೊರೆದು ಕೈ ಹಿಡಿದಿದರು. ಇನ್ನು ಸಚಿವ ಶಿವಾನಂದ ಪಾಟೀಲ, ಮಾಜಿ ಸಚಿವ ಬಿ.ಆರ್ ಯಾವಗಲ್ ಅವರು ನಿಂಗಬಸಪ್ಪ ಬಾಣದ್ ಅವರ ತಲೆ ಮೇಲಿನ ಕಪ್ಪು ಟೋಪಿ ತೆಗೆದು ಖಾದಿ ಗಾಂಧಿ ಟೋಪಿ ಹಾಕಿ ಕಾಂಗ್ರೆಸ್ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಮಾಡಿಕೊಂಡರು.

ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ನಿಂಗಬಸಪ್ಪ ಬಾಣದ್, ಬಿಜೆಪಿ ನರಗುಂದ ಮತ ಕ್ಷೇತ್ರದಲ್ಲಿ ಹಣ ಹಂಚಿಚುನಾವಣೆ ಮಾಡಿದೆ. ಭ್ರಷ್ಟಾಚಾರ ವಿರೋಧಿಯಾಗಿ ಬಿಜೆಪಿ ಪಕ್ಷ ತೊರೆದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಕಪ್ಪು ಹಣ ತರುತ್ತೇನೆ ಅಂತಾರೆ. ಆದ್ರೆ ಕಾಂಗ್ರೆಸ್ ನಾಯಕರ ಮೇಲೆ ಐಟಿ ‌ದಾಳಿ ಮಾಡಿಸುತ್ತಾರೆ ಎಂದು ಟೀಕಿಸಿದರು.

 

 

 

 

 

 

 

 

By admin

Leave a Reply

Your email address will not be published. Required fields are marked *

Verified by MonsterInsights