ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ಮೈಸೂರಿನಲ್ಲಿ ಪಿಟಿಐ ವಿಡಿಯೋಸ್ ಸುದ್ದಿಸಂಸ್ಥೆ ಜತೆ ಮಾತನಾಡಿದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆದ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಕುರ್ಚಿ ಬಿಟ್ಟುಕೊಡಬೇಕಾಗುತ್ತದೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದರು.
ಅದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಹೈಕಮಾಂಡ್ ತೀರ್ಮಾನಿಸಿದರೆ ಮುಂದುವರಿಯುತ್ತೇನೆ. ಇಲ್ಲದಿದ್ದರೆ ಹೈಕಮಾಂಡ್ ನಿರ್ಧಾರದಂತೆ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಈ ಮೂಲಕ ಹೈಕಮಾಂಡ್ ಹೇಳಿದರೆ ಸಿಎಂ ಗಾದಿ ಬಿಟ್ಟುಕೊಡುವ ಸುಳಿವು ನೀಡಿದರು.