ಹೊಸಕೋಟೆ :ಹೊಸಕೋಟೆ ಹೊರವಲಯದಲ್ಲಿ ಸರಣಿ ಅಪಘಾತ ನಡೆದಿದೆ. ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಸರಣಿ ಅಪಘಾತ ಉಂಟಾಗಿದೆ. ಎರಡು ಕಾರು ಹಾಗೂ ಆಟೋ ನಡುವೆ ಡಿಕ್ಕಿ ಉಂಟಾದ ಪರಿಣಾಮ ಸ್ಥಳದಲ್ಲೇ ಆಟೋ ಚಾಲಕ ಸಾವನ್ನಪ್ಪಿದ್ದಾರೆ.
ಹೊಸಕೋಟೆ ಹಾಗೂ ಕಾಡುಗೋಡಿ ರಸ್ತೆಯ ಗೊರವಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಲ್ಲಿದ್ದವರು ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾದ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.