ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯೆಕ್ತಿ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಸಮಗಾರ(42) ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿಸಿಲಿನ ತಾಪದಿಂದ ಆಥವಾ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆಯನ್ನ ಪತ್ನಿ ವ್ಯಕ್ತಪಡಿಸಿದ್ದಾರೆ. ಶರಣಪ್ಪ ಸಮಗಾರ ಮರಣೋತ್ತರ ಪರೀಕ್ಷೆಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಬಿಸಿಲಿನ ಹೊಡೆತಕ್ಕೆ ಶರಣಪ್ಪನ ಸಾವನ್ನಪ್ಪಿದ್ದನಾ? ಅಥವಾ ಹೃದಯಾಘಾತದಿಂದ ಶರಣಪ್ಪ ಸಾವನ್ನಪ್ಪಿರೋದಾ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಕಲ್ಯಾಣ ಕರ್ನಾಟಕ ಭಾಗದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಆರ್ಭಟ ಹೆಚ್ಚಾಗುತ್ತಿದೆ.
ಪ್ರತಿನಿತ್ಯ 41 ಡಿಗ್ರಿ 42 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲಿನ ತಾಪಮಾನ ದಾಖಲಾಗುತ್ತಿದ್ದು, ಕಲಬುರಗಿಯಲ್ಲಿ ಬಿಸಿಲಿನ ಹೊಡೆತಕ್ಕೆ ಜನ ಕಂಗೆಟ್ಟು ಹೋಗಿದ್ದಾರೆ. ಬಿಸಿಲಿನ ಹೊಡೆತಕ್ಕೆ ಮನೆಯಿಂದ ಹೊರ ಬರೋದಕ್ಕು ಹೇದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಆದರೂ ಕೂಡ ರಣ ಬಿಸಿಲಿನಲ್ಲೆ ಕಲಬುರಗಿ ಜನರು ಓಡಾಟ ನಡೆಸುತ್ತಿದ್ದಾರೆ.
ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನಲೆ ಆರೋಗ್ಯ ಇಲಾಖೆ ಜಿಲ್ಲಾಡಳಿತ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಮಕ್ಕಳು , ವಯಸ್ಸಾದವರು, ಬಾಣಂತಿಯರು ಬಿಸಿಲಿನ ತಾಪದಿಂದ ಪಾರಾಗಲು ಮನೆಯಲ್ಲೆ ಇರಲು ಸೂಚನೆ ನೀಡಲಾಗಿದೆ. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆ ಯವರೆಗೆ ಗರಿಷ್ಟ ತಾಪಮಾನ ದಾಖಲು ದಾಖಲಾಗಿದೆ.


