ಕಲಬುರಗಿ : ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಲಬುರಗಿಯಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ರೋಜಾ ಪೊಲೀಸ್ ಠಾಣೆಯ ಸರ್ಕಲ್ ಅನೀಸ್ ಮುಜಾವರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಕಳ್ಳರಿಂದ 9 ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿಗಳನ್ನು ಗುಂಡಪ್ಪ ಹಾಗೂ ಮಾದರ್ ಅಲಿ ಎಂದು ಗುರುತಿಸಲಾಗಿದೆ. ಅನಿಲ ಗೌಡ ಎಂಬುವವರು ತಮ್ಮ ಬೈಕ್ ಕಳ್ಳತನವಾಗಿದೆ ಎಂದು ದೂರು ನೀಡಿದ್ದರು. ಪ್ರಕ್ರಿಯೆ ದಾಖಲಾದ 24 ಗಂಟೆಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ರೋಜಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.