ಕಲಬುರಗಿ : ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಘಟನೆ ಪುಣೆ- ಭುವನೇಶ್ವರ ರೈಲಿನಲ್ಲಿ ನಡೆದಿದ್ದು, ವಾಡಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ರಬಕುಣಿ ಮಲಿಕ್ ಹಾಗೂ ಅಭಿಮನ್ಯು ಮಲಿಕ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 22 ಕೇ ಜಿ ಗಾಂಜಾವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರೈಲು ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ. ಚೀಲದಲ್ಲಿ ಗಾಂಜಾ ಸಾಗಾಟ ಮಾಡಲಾಗುತ್ತಿದ್ದು, ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


