ಕಲಬುರಗಿ : ಕೈಯಲ್ಲಿ ನಕಲಿ ಪಿಸ್ತೂಲ್ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟ ಇಬ್ಬರು ಯುವಕರ ವಿರುದ್ಧ ಎಫ್ ಐ ಆರ್ ದಾಖಲಾಗಿರುವಂತಹ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿದೆ.
ಪಿಸ್ತೂಲ್ ಮಾದರಿಯ ಲೈಟರ್ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಯುವಕರು ವಿಡಿಯೋ ಮಾಡಿ ಬಿಟ್ಟಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ತುಂಬಾ ವೈರಲ್ ಆಗುತ್ತಿತ್ತು. ಇಬ್ಬರು ಯುವಕರನ್ನು ಕರೆಸಿ ಪೊಲೀಸರು ವಾರ್ನ್ ಮಾಡಿ ಬಿಟ್ಟಿದ್ದಾರೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.