ಕಲಬುರಗಿ: ರಾಜ್ಯದಲ್ಲಿ ಸಧ್ಯ ಬರಗಾಲದ ಪರಿಸ್ಥಿತಿ ತಲೆದೂರಿದ್ದು, ಸರ್ಕಾರದ ನಿರ್ದೇಶನದಂತೆ ಸಚಿವ ಪ್ರಿಯಾಂಕ್ ಖರ್ಗೆ, ನಾರಾಯಣಪುರ ಜಲಾಶಯದಿಂದ ಒಂದು ಟಿಎಂಸಿ ನೀರು ಬಿಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತರು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.
ಭೀಕರ ಬರಗಾಲದ ಹಿನ್ನೆಲೆ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೀವ್ರ ತೊಂದರೆ ಉಂಟಾಗಿತ್ತು. ಜೊತೆಗೆ, ಭೀಮಾ ನದಿ ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಸಧ್ಯದ ಪರಿಸ್ಥಿತಿಯಲ್ಲಿ ಭೀಮಾ ನದಿಗೆ ನೀರು ಬಿಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಡಿಸಿಎಮ್ ಜೊತೆಗೆ ಚರ್ಚೆ ಮಾಡಿ ನೀರಿನ ಅವಶ್ಯಕತೆ ಬಗ್ಗೆ ಮಾಹಿತಿ ನೀಡಿದ್ದೆ ಹಾಗೇ, ಶಾಸಕ ಎಂವೈ ಪಾಟೀಲ್ ಕೂಡ ಡಿಸಿಎಮ್ ಅವರ ಜೊತೆಗೆ ಮಾತನಾಡಿದ್ದರು.
ಮನವಿಗೆ ಸ್ಪಂದಿಸಿದ ಡಿಸಿಎಮ್ ಒಂದು ಟಿಎಂಸಿ ನೀರು ಬಿಡುವಂತೆ ಆದೇಶ ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು. ಅಷ್ಟು ಮಾತ್ರವಲ್ಲದೇ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೂ ಕೂಡ ಪತ್ರ ಬರೆಯಲಾಗಿದೆ.
ಆದರೆ ಅಲ್ಲಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ನಾವು ಮೇಲ್ಲಿಂದ ಮೇಲೆ ಒತ್ತಡ ಹಾಕುತ್ತಿದ್ದೆವೆ ಎಂದು ಸ್ಪಷ್ಟಪಡಿಸಿದರು. ಇನ್ನೂ ನೀರಿಗೆ ಅಭಾವವಿರುವ ಸಧ್ಯದ ಪರಿಸ್ಥಿತಿಯಲ್ಲಿ ಒಂದು ಟಿಎಂಸಿ ನೀರು ಕುಡಿಯಲು ಮಾತ್ರ ಬಳಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಜನರಲ್ಲಿ ಮನವಿ ಮಾಡಿದರು.


