ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ ಅವರು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ನಂತರ ನಗರದ ಎನ್.ವಿ ಕಾಲೇಜು ಮೈದಾನದಲ್ಲಿ 11.30 ಗಂಟೆಗೆ ಬಹಿರಂಗ ಸಮಾವೇಶ ಏರ್ಪಡಿಸಲಾಗಿದ್ದು.ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಮ್ ಡಿಕೆ ಶಿವಕುಮಾರ, ಕರ್ನಾಟಕ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ, ಸೇರಿದಂತೆ ಅನೇಕ ಸಚಿವರು, ಶಾಸಕರು. ದೊಡ್ಡಮನಿಗೆ ಸಾತ್ ನೀಡಲಿದ್ದಾರೆ. ಹಾಗೂ ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿಯಾಗಲಿದ್ದಾರೆ ಎಂದು ತಿಳಿಸಿರುತ್ತಾರೆ.