ಕೋಲಾರ : ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿ ಮಲ್ಲೇಶ್ ಹಾಗೂ ಜೆಡಿಎಸ್ ಮುಖಂಡರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಬಂಧ ಚರ್ಚೆ ಮಾಡಲು ಭೇಟಿಯಾಗಿದ್ದರು.
ಜೆಡಿಎಸ್ ನಾಯಕರ ಭೇಟಿ ಬಳಿಕ ಸಂಸದ ಮುನಿಸ್ವಾಮಿ ಹೇಳಿಕೆ. NDA ಮೈತ್ರಿಕೂಟದ ಕೋಲಾರ ಅಭ್ಯರ್ಥಿ ಮಲ್ಲೇಶ್ ಅವರು ಭೇಟಿಯಾಗಿದ್ದಾರೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 28 ಕ್ಷೇತ್ರದಲ್ಲೂ ಮೈತ್ರಿ ಗೆಲ್ಲುತ್ತದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ನಮ್ಮೆಲ್ಲರ ಅಭ್ಯರ್ಥಿ ಮೋದಿ & ದೇವೇಗೌಡರು ಅಂತ ಮತ ಹಾಕಬೇಕಾಗಿದೆ. ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಮೋದಿ ಅವರ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ನಾಳೆ ಜಿಲ್ಲಾ ಮಟ್ಟದ ಜೆಡಿಎಸ್ & ಬಿಜೆಪಿ ಸಮನ್ವಯ ಸಮಿತಿ ಸಭೆ ನಡೆಸುತ್ತೇವೆ. ಜೆಡಿಎಸ್ ಮತ್ತು ಬಿಜೆಪಿಯವರು ಶಿಸ್ತಿನ ಸಿಪಾಯಿಗಳಂತೆ ನಡೆದುಕೊಳ್ಳುತ್ತೇವೆ. ನಮ್ಮ ನಮ್ಮಲ್ಲಿ ಏನೇ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ಬದಿಗೊತ್ತಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಸಾಮಾನ್ಯ ಕಾರ್ಪೋರೆಟರ್ ಆಗಿದ್ದ ನನ್ನನ್ನು ಕೋಲಾರ ಎಂಪಿ ಮಾಡಿದ್ದಾರೆ. ಅದೇ ರೀತಿ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಸಹ ಕೋಲಾರದವರೇ, ನಮ್ಮ ಮನೆಯ ಮಗ ಮಲ್ಲೇಶ್ ಅವರನ್ನು ಗೆಲ್ಲಿಸಲು ನಾವು ಕೆಲಸ ಮಾಡುತ್ತೇವೆ. ನಮಗೆ ಒಂದೊಂದು ಮತ ಸಹ ಮುಖ್ಯ, ಎಲ್ಲರೂ ಜೊತೆಯಾಗಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಸಂಸದ ಎಸ್ ಮುನಿಸ್ವಾಮಿ ಹೇಳಿದ್ದಾರೆ.