ಕೊಪ್ಪಳ : ಲೋಕಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಪ್ಪಳ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರ್ತಾ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ಚಿಣಿಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಿದರೂ ಸಹ ಬಿಜೆಪಿ ಅಭ್ಯರ್ಥಿ ಬಸವರಾಜ್ ಪರ ಚಿಣಿ ಬಿರುಸಿನ ಮತಯಾಚನೆ ಮಾಡುತ್ತಿದ್ದಾರೆ.
ಕೊಪ್ಪಳ ಬಿಜೆಪಿ ಅಭ್ಯರ್ಥಿ ಡಾ ಬಸವರಾಜ್ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗಿದ್ದು, ಬಿರುಸಿನ ಪ್ರಚಾರ ಮಾಡ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಬಸವರಾಜ್ ಪರವಾಗಿ ಕುಷ್ಟಗಿ ನಗರದಲ್ಲಿ ಪ್ರಭಾಕರ ಚಿಣಿ ಮನೆ ಮನೆಗೂ ತೆರಳಿ, ಸಾರ್ವಜನಿಕ ಸಭೆ ನಡೆಸುವ ಮೂಲಕ ಪ್ರಚಾರ ಮಾಡಿದ್ರು. ಬಿಜೆಪಿ ಅಭ್ಯರ್ಥಿ ಬಸವರಾಜ್ ಗೆ ಮತ ಹಾಕಿ ಭಾರಿ ಅಂತರದಲ್ಲಿ ಗೆಲ್ಲಿಸಬೇಕೆಂದು ಪ್ರಭಾಕರ ಚಿಣಿ ಮತದಾರರಲ್ಲಿ ಮನವಿ ಮಾಡಿದರು.