ಹುಬ್ಬಳ್ಳಿ : ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ಚುನಾವಣಾ ನಡೆಯುತ್ತದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನು ಹೇಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಧಾರವಾಡ ಲೋಕಸಭಾ ಚುನಾವಣೆಗೆ ದಿಂಗಾಲೇಶ್ವರ ಸ್ಪರ್ಧೆ ಬಗ್ಗೆ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಳೆದ ಹತ್ತು ವರ್ಷದಲ್ಲಿ ಅಂದರೆ ಮೋದಿಯವರು ಬರುವ ಮುಂಚೆ ದೇಶ ಹೇಗಿತ್ತು ಈಗ ಹೇಗಿದೆ ಎಂಬುವುದು ಜನರಿಗೆ ಗೊತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಂದಮೇಲೆ ಭಾರತ ದೇಶ ಐದನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದರು.
ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವ ಬೇಕೋ..? ರಾಹುಲ್ ಗಾಂಧಿ ಹಾಗೂ ಇತ್ಯಾದಿ ನೇತೃತ್ವ ಬೇಕೋ..? ಎಂಬುವುದನ್ನು ನಿರ್ಧರಿಸುವ ಚುನಾವಣೆ ಇದು. ಇಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿಕೊಂಡು ಜನರು ಆಶೀರ್ವಾದ ಮಾಡಿ ಮಾತವನ್ನು ನೀಡುತ್ತಾರೆ ಎಂದ ಪ್ರಹ್ಲಾದ ಜೋಶಿ ಹೇಳಿದರು.