ಬೆಂಗಳೂರಿನ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಮತ್ತು ಮಾಸ್ಟರ್ಮೈಂಡ್ನನ್ನು ವಶಪಡಿಸಿಕೊಳ್ಳುವಲ್ಲಿ ಕೊನೆಗೂ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಪಶ್ಚಿಮ ಬಂಗಾಳದಲ್ಲಿ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ 42 ದಿನಗಳ ನಂತರ ಬಾಂಬರ್ ಹಾಗೂ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.