
ತುಮಕೂರು : ವಿದ್ಯುತ್ ಶಾಕ್ ನಿಂದ ದಿನಗೂಲಿ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಕ್ಯಾದಗೊಂಡನಹಳ್ಳಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ದೊಡ್ಡಯಲ್ಕೂರು ಗ್ರಾಮದ ನರೇಂದ್ರ ಕುಮಾರ್(25) ಎಂಬುವರು ಮೃತ ದುರ್ದೈವಿಯಾಗಿದ್ದಾರೆ.

ವಿದ್ಯುತ್ ತಂತಿಗೆ ಅಡ್ಡಿಯಾಗಿದ್ದ ಮರ ಕಡಿಯುವ ವೇಳೆ ವಿದ್ಯುತ್ ಸ್ಪರ್ಶವಾಗಿ ಸಾವನಪ್ಪಿದ್ದಾರೆ. ಮೃತ ಕುಟುಂಬಸ್ಥರಿಗೆ ಅಧಿಕಾರಿಗಳು ಯಾವುದೇ ಸಾಂತ್ವಾನವನ್ನೂ ಸಹ ಮಾಡಿಲ್ಲ. ಹಾಗಾಗಿ ಮಧುಗಿರಿ ಸರ್ಕಾರಿ ಆಸ್ಪತ್ರೆ ಎದುರು ಪರಿಹಾರ ನೀಡುವಂತೆ ಆಗ್ರಹಿಸಿ ಸಂಬಂಧಿಕರು ಪ್ರತಿಭಟನೆಯನ್ನ ನಡೆಸುತ್ತಿದ್ದಾರೆ. ಈ ಘಟನೆ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.




