ಬೆಂಗಳೂರು: ಕಾಂಗ್ರೆಸ್ ಹಾಗೂ ಅಭ್ಯರ್ಥಿ ಡಿಕೆ ಸುರೇಶ್, ಡಿ.ಕೆ ಶಿವಕುಮಾರ್ ಅವರು ಸೋಲಿನ ಭಯದಲ್ಲಿ ತಮ್ಮ ಕಾರ್ಯಕರ್ತರಿಗೆ ಶಾಲು ಹಾಕಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಜೆಡಿಎಸ್ ಆರೋಪಿಸಿದೆ.
ಕಾಂಗ್ರೆಸ್ಸಿಗರಿಗೆ ಅದರಲ್ಲೂ ನಕಲಿ ಸಿಎಂ ಡಿ.ಕೆ ಶಿವಕುಮಾರ್ ಅವರು ಸೋಲಿನ ಭೀತಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ ಪ್ರಚಾರ ಮಾಡುತ್ತಿದ್ದಾರೆ. ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್ಗಳನ್ನು ಮಾಡಿಸುತ್ತದೆ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಜೆಡಿಎಸ್ನ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರ ಮಧ್ಯೆ ನೇರ ಪೈಪೋಟಿ ನಡೆದಿದೆ.
ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ @DKShivakumar ಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ.
ಸೋಲಿನ ಭೀತಿ, ಹತಾಶೆ ಎಂತೆಂತಹ… pic.twitter.com/P8Zl1AJS00
— Janata Dal Secular (@JanataDal_S) April 12, 2024