ಬೆಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಕಳೆದ ಭಾನುವಾರ (ಏಪ್ರಿಲ್ 14 ) ದಂದು ಮೈಸೂರಿನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು. ನಂತರ ಮಂಗಳೂರಿನಲ್ಲಿ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು
ಇದೀಗ ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದು ಅಂದು ಮಧ್ಯಹ್ನ 3.35ಕ್ಕೆ ಭೇಟಿ ನೀಡಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಬಳ್ಳಾಪುರದ ಅಗಲಗುರ್ಕಿ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದಾದ ಬಳಿಕ ಬೆಂಗಳೂರಿಗೆ ಪ್ರಯಾಣಿಸುವ ಪ್ರಧಾನಿ ಮೋದಿ ಅಂದು 5.20 ರ್ಯಾಲಿ ನಡೆಸಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.