ಬೆಂಗಳೂರು: ಕಾರ್ಮಿಕ ದಿನಾಚರಣೆ ನಿಮಿತ್ತ ಬೆಂಗಳೂರಿನ ಹೆಚ್.ಆರ್.ಬಿ.ಆರ್ ಜಲಮಂಡಳಿ ಸೇವಾ ಕೇಂದ್ರ ದಲ್ಲಿ ಜಲಮಂಡಳಿಯ ಸಿಬ್ಬಂದಿ ಗಳು ಹಾಗೂ ಕುಟುಂಬ ವರ್ಗದವರಿಗೆ ಏರ್ಪಡಿಸಿದ್ದ
ಉಚಿತ ಆರೋಗ್ಯ ಶಿಬಿರಕ್ಕೆ ಜಲಮಂಡಳಿ ಅಧ್ಯಕ್ಷ ರಾದ ಡಾ. ವಿ.ರಾಮ್ ಪ್ರಸಾತ್ ಮನೋಹರ್ ಅವರು ಚಾಲನೆ ನೀಡಿದರು.

ನಂತರ ಅವರು ಕಾರ್ಮಿಕರು ಹಾಗೂ ಕಾರ್ಮಿಕ ಕುಟುಂಬದವರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಜಲಮಂಡಳಿಯ ಮುಖ್ಯ ಎಂಜಿನಿಯರ್ ಗಳು ಸೇರಿದಂತೆ ಅಧಿಕಾರಿಗಳು ಇದ್ದರು.


