Tuesday, June 24, 2025
25.9 C
Bengaluru
Google search engine
LIVE
ಮನೆರಾಜಕೀಯಸಂಸದ ವಿ‌ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ

ಸಂಸದ ವಿ‌ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ

ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ.

ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ ಹೆಸರಾಗಿದ್ದ 76 ವರ್ಷದ ಶ್ರೀನಿವಾಸ ಪ್ರಸಾದ್‌ ಅವರು ಕಳೆದ  ತಿಂಗಳು ರಾಜಕೀಯದಿಂದ ನಿವೃತ್ತಿ ಪಡೆದಿದ್ದರು.

ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಸಂಸದರು, ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ್ದಾರೆ.

2013 ರಿಂದ 2016 ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.

ಪ್ರಸಾದ್ ಅವರಿಗೆ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್ ಮತ್ತು ಪೂನಂ ಪ್ರಸಾದ್ ಎಂಬ ಮೂರು ಜನ ಹೆಣ್ಣು ಮಕ್ಕಳು  ಇದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments