ಸುದ್ದಿ

ನೇಹಾ ವಿಚಾರದಲ್ಲಿ ಡಿ ಬಾಸ್ ಕಾನೂನಿನ ಮಂತ್ರ.

ಬೆಂಗಳೂರು: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಕ್ಯಾಂಪಸ್‌ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣದ ಸಂಬಂಧ ಪೊಲೀಸರು ಆರೋಪಿ ಫಯಾಜ್‌ನನ್ನು ಬಂಧಿಸಿದ್ದಾರೆ. ಆರೋಪಿ ಫಯಾಜ್‌ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ  ಜಸ್ಟಿಸ್ ಫಾರ್ ನೇಹಾ ಎಂದು ಟ್ರೆಂಡಿಂಗ್ ಆಗುತ್ತಿದೆ. ಇದೇ ಪ್ರಕರಣದ ಸಂಬಂಧ ಕನ್ನಡ ನಟ ದರ್ಶನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಸಿರುವ ದರ್ಶನ್‌, ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button