ರಾಜಕೀಯರಾಜ್ಯಸುದ್ದಿ

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ.

ಯಾದಗಿರಿ: ವಿದ್ಯಾರ್ಥಿನಿ‌ ನೇಹಾ ಹತ್ಯೆ ಖಂಡಿಸಿ ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಮಾಜಿ ಶಾಸಕ‌ ವೆಂಕಟರೆಡ್ಡಿ‌ ಮುದ್ನಾಳ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ಈ ವೇಳೆ‌ ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟನೆ ಮಾಡಿ ನೇಹಾ ಕೊಲೆ ಆರೋಪಿ ಫಯಾಜ್ ನನ್ನ ಗಲ್ಲಿಗೇರಿಸುವ ಮೂಲಕ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ, ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

Comments (0)

Your email address will not be published. Required fields are marked *

Back to top button