ರಾಜಕೀಯಸಿನಿಮಾಸುದ್ದಿ

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್‌ ಮಾಡಲ್ಲ

 ಬೆಂಗಳೂರು: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ ಪ್ರಯಾಣದಲ್ಲಿ ಗಮನಾರ್ಹ ಬದಲಾವಣೆ ಮಾಡಿದೆ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಕಿಡಿಕಾರಿದ್ದಾರೆ.

ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಕರ್ನಾಟಕ ಮಾಜಿ ಸಚಿವೆ ಡಾ. ಅಂಜಲಿ ನಿಂಬಾಳ್ಕರ್‌ ಅವರು ನಟಿ ರಶ್ಮಿಕಾ ಮಂದಣ್ಣ ಅವರಿಗೆ ಸ್ವಲ್ಪ ಕಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಬೂಟು ನೆಕ್ಕುವುದನ್ನು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ವಿಡಿಯೋಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವಮಾಜಿ ಸಚಿವೆ ಅಂಜಲಿ ನಿಂಬಾಳ್ಕರ್, ಬುಲೆಟ್‌ ರೈಲಿನ ಬಗ್ಗೆ ನಿಮಗೆ ಏನಾದರೂ ಹೇಳಲು ಇದೆಯೇ..? ಎಂದು ಬುಲೆಟ್ ಟ್ರೈನ್ ಬಗ್ಗೆ ಪ್ರಶ್ನಿಸಿದ್ದಾರೆ. ಇದಾದ ಬಳಿಕ ‘ಮುಂಬೈ ಮತ್ತು ಅಹಮದಾಬಾದ್‌ ಬುಲೆಟ್‌ ರೈಲು : ಅದೊಂದು ನಿರ್ಮಾಣದ ದುರಂತ, ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮಗೆ ಮೆಗಾಸ್ಟಾರ್‌ ಮಾಡಲು ಯಾವುದೇ ಸಹಾಯ ಮಾಡುವುದಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಅಟಲ್ ಸೇತುವನ್ನು ಹೊಗಳಿದ ನಟಿ ರಶ್ಮಿಕಾ ಮಂದಣ್ಣ

“ದಕ್ಷಿಣ ಭಾರತದಿಂದ ಉತ್ತರ ಭಾರತಕ್ಕೆ… ಪಶ್ಚಿಮ ಭಾರತದಿಂದ ಪೂರ್ವ ಭಾರತಕ್ಕೆ… ಜನರನ್ನು ಸಂಪರ್ಕಿಸುತ್ತಿದೆ, ಹೃದಯಗಳನ್ನು ಸಂಪರ್ಕಿಸುತ್ತಿದೆ! ಮೈಇಂಡಿಯಾ” ಎಂಬ ಶೀರ್ಷಿಕೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದರು. ಅದರಲ್ಲಿ ಹೊಸದಾಗಿ ನಿರ್ಮಿಸಿದ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‌’ ಕುರಿತು ಇಂಟ್ರಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಈ ಅಟಲ್ ಸೇತುವೆಯನ್ನು ಗೇಮ್ ಚೇಂಜರ್ ಎಂದು ಕರೆದಿದ್ದು, ಸೇತುವೆಯು ಪ್ರಯಾಣದ ಸಮಯವನ್ನು ಹೇಗೆ ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂಬುದನ್ನು ರಶ್ಮಿಕಾ ಮಂದಣ್ಣ ವಿವರಿಸಿದ್ದಾರೆ. ಹಿಂದಿನ ಎರಡು ಗಂಟೆಗಳ ಪ್ರಯಾಣವನ್ನು ಕೇವಲ 20 ನಿಮಿಷಗಳಿಗೆ ಕಡಿತಗೊಳಿಸಸುತ್ತದೆ ಎಂಬುದನ್ನು ವಿವರಿಸಿದ್ದಾರೆ. ಅವರ ಈ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ರಿಟ್ವೀಟ್ ಮಾಡಿ ಹೊಗಳಿದ್ದಾರೆ.

ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com

 

Comments (0)

Your email address will not be published. Required fields are marked *

Back to top button