ರಾಜಕೀಯಸುದ್ದಿ

ಪೆನ್ ಡ್ರೈವ್ ಪ್ರಕರಣ: ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್ ಅಭಿಯಾನ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಕಾಂಗ್ರೆಸ್ ಜೆಡಿಎಸ್‌ ನಡುವೆ ಫೋಸ್ಟರ್‌ ವಾರ್‌ ಶುರುವಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ರಾತ್ರೋ ರಾತ್ರಿ ಬೆಂಗಳೂರಿನ ಬೀದಿ ಬೀದಿಗಳಲ್ಲಿ ಡಿಕೆ ಶಿವಕುಮಾರ್​ ಮತ್ತು ಸಿದ್ದರಾಮಯ್ಯ ಅವರನ್ನು ಒಳಗೊಂಡ ಬಿತ್ತಿಪತ್ರಗಳು ಪತ್ತೆಯಾಗಿವೆ. ನಗರದ ಪ್ರಮುಖ ಸ್ಥಳಗಳಲ್ಲಿ ಈ ಫೋಟೋಗಳು ವೈರಲ್‌ ಆಗಿದೆ. ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯವಾಗಿ ಸಾಕಷ್ಟು ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಪ್ರಮುಖ ವ್ಯಕ್ತಿ ಬಿಜೆಪಿ ಮುಖಂಡ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.

 

ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com

 

Comments (0)

Your email address will not be published. Required fields are marked *

Back to top button