ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣವನ್ನು ಎಸ್ಐಟಿ ಪಾರದರ್ಶಕವಾಗಿ ತನಿಖೆಯನ್ನು ನಡೆಸುತ್ತಿಲ್ಲ. ಮಧ್ಯಪ್ರವೇಶಿಸಿ, ಸರಿಯಾದ ರೀತಿಯಲ್ಲಿ ತನಿಖೆಗೆ ಸೂಚಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ.
ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗವು ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ಸಲ್ಲಿಸಿತು.

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಕೇಸ್, ಹೆಚ್.ಡಿ ರೇವಣ್ಣ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಎಸ್ಐಟಿ ತನಿಖೆಯನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ. ತಾವು ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸುವಂತೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com


